ದೇಶದಲ್ಲಿ ಕಳೆದ ಒಂದು ದಿನದಲ್ಲಿ 4120 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರೆ, 3.62 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,33,40,938ಕ್ಕೆ ಜಿಗಿತ ಕಂಡರೆ, ಸಾವಿನ ಸಂಖ್ಯೆ 2,58,317ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 3,62,727 ಮಂದಿಗೆ ಸೋಂಕು ತಗುಲಿದ್ದರೆ, 3,52,181 ಮಂದಿ ಗುಣಮುಖಿತರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟಾರೆ 1,97,34,823ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 37,10,525ಕ್ಕೆ ಜಿಗಿತ ಕಂಡಿದೆ.