ದೇಶದಲ್ಲಿ ಕೊರೊನಾ 2ನೇ ಅಲೆಯ ಅಬ್ಬರ ಇಳಿಮುಖ ಕಾಣುತ್ತಿದ್ದು, ಒಂದು ದಿನದಲ್ಲಿ 2.76 ಲಕ್ಷ ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದ್ದು, 3874 ಮಂದಿ ಮಹಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಟ್ಟಾರೆ ಸೋಂಕಿತರ ಸಂಖ್ಯೆ 2,57,72,440ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,87,122ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 3,69,077 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,23,55,440ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 31,29,878ಕ್ಕೆ ಇಳಿಕೆಯಾಗಿದೆ.