ಮೇಲ್ವಿಚಾರಕನ ಕಿರುಕುಳಕ್ಕೆ ಬೇಸತ್ತು ಕಿಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗುತ್ತಿಗೆ ಆಧಾರದ ಮೇಲೆ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಶ್ರುತಿ ವಿಭೂತಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಏಶಿಯನ್ ಸೆಕ್ಯೂರಿಟಿ ಸಂಸ್ಥೆಯ ಮೇಲ್ವಿಚಾರಕ ಮಾರುತಿ ವಡ್ಡರ ಎಂಬಾತನಿಂದ ಕಿರುಕುಳ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಸಂಸ್ಥೆಯ ವತಿಯಿಂದ ಕಳೆದ ಒಂದು ವರ್ಷದಿಂದ ಕೆಲಸವನ್ನು ಮಾಡುತ್ತಿರುವ ಶ್ರುತಿ ವಿಭೂತಿ, ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಕೆಲಸವನ್ನು ಮಾಡುತ್ತಿದ್ದು, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ಕೆಲಸದ ಸಮಯದಲ್ಲೇ ನಿದ್ರೆ ಮಾತ್ರೆ ಸೇವಿಸಿ ಶ್ರುತಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಚಿಕಿತ್ಸೆ ನೀಡಲಾಗಿದೆ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.