ಬಾಗಲಕೋಟೆ : ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ಮೂಡಿಸಿದೆ. ಈ ಮಧ್ಯೆ ಸರಿಯಾದ ಸಮಯಕ್ಕೆ ಆಕ್ಸಿಜನ್ ಇಲ್ಲದೆ ಮೃತ ಪಟ್ಟಿರುವ ಸಂಖ್ಯೆ ಕೂಡಾ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಬಾಗಲಕೋಟ ಜಿಲ್ಲೆಯ ಹುನಗುಂದ ಶಾಸಕರಾದ ದೊಡ್ಡನಗೌಡ ಪಾಟೀಲ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಆಕ್ಸಿಜನ್ ಘಟಕ ಪ್ರಾರಂಭಿಸುವ ಮೂಲಕ ಗಮನ ಸೆಳೆದಿದ್ದಾರೆ.
ಹುನಗುಂದ, ಇಲಕಲ್ಲ ತಾಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಪರಿಣಾಮ,ಶಾಸಕರಾದ ದೊಡ್ಡನಗೌಡ ಪಾಟೀಲ ಅವರು,ಕೋವಿಡ್ ಚಿಕಿತ್ಸೆಗೆ ನಿಗದಿ ಪಡಿಸಿದ ಗೌಳೇರ ಗುಡಿ ಹತ್ತಿರ ಇರುವ 30 ಹಾಸಿಗೆಗಳ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಹಾಗೂ ಬೇಡ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಪರೀಶಿಲನೆ ನಡೆಸಿದರು. ಚಾಮರಾಜನಗರ ದಲ್ಲಿ ಆದ ಘಟನೆಯನ್ನು ಮರುಕಳಿಸ ದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.
ಇದೇ ಸಮಯದಲ್ಲಿ ಇಲಕಲ್ ಹಾಗೂ ಹುನಗುಂದ ನಗರಕ್ಕೆ ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ತಮ್ಮ ಸ್ವಂತ ಖರ್ಚಿನಲ್ಲಿ 12 ಕೇ ಎಲ್ ಆಕ್ಸಿಜನ್ ಟ್ಯಾಂಕರ್ಗಳನ್ನು ಖರೀದಿಸಿ, ಆಸ್ಪತ್ರೆಗೆ ನೀಡಿದರು. ಸುಮಾರು ಹತ್ತು ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಆಕ್ಸಿಜನ್ ತುಂಬಿಸುವ ಕಾರ್ಯ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕೋವಿಡ್ ರೋಗ ಹರಡುತ್ತಿರುವುದರಿಂದ ಸಾವು ನೋವು ಹೆಚ್ಚಾಗುತ್ತಿದೆ. ಆಕ್ಸಿಜನ್ ಕೊರತೆ ಆಗದಂತೆ ಆಕ್ಸಿಜನ್ ಟ್ಯಾಂಕರ್ ತರಿಸಲಾಗಿದೆ. ಸುಮಾರು 120 ಸಿಲಿಂಡರ್ ತುಂಬಿಸಿ ವ್ಯವಸ್ಥೆ ಮಾಡಿ ಕೂಡಲಾಗಿದೆ ಎಂದರು.