ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿ (Bengaluru) ನ ಶ್ರೀನಗರ (Sri nagar) ಬಳಿಯ ಅವಲಹಳ್ಳಿಯಲ್ಲಿ ನಡೆದಿದೆ. ಮಂಡ್ಯ (Mandya) ದ ನಾಗಮಂಗಲ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಣ್ಣಯ್ಯ ಉಮಾ ಎಂಬಾಕೆಯನ್ನು 5 ವರ್ಷಗಳ ಹಿಂದೆ ಮದುವೆ ಆಗಿದ್ದರು. ಮದುವೆ ಬಳಿಕ ಗಂಡ ಹೆಂಡತಿ ಜಗಳ ಮಾಡಿಕೊಂಡಿದ್ರು. ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿ ಅಣ್ಣಯ್ಯ ಕೆಲಸ ಮಾಡ್ತಿದ್ದರು. ಎಷ್ಟು ದುಡಿದ್ರು ಹೆಂಡತಿ ದುಡ್ಡು ದುಡ್ಡು ಎನ್ನುತ್ತಾಳೆ. ನಾನು ಎಷ್ಟು ದುಡಿದ್ರು ಸಾಕಾಗುವುದಿಲ್ಲಾ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಅಗಿದೆ. ನನ್ಮ ಸಾವಿಗೆ ನಾನೆ ಕಾರಣ ಎಂದು ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹನುಮಂತ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : – ಕಾಂಗ್ರೆಸ್ ಆಕಾಂಕ್ಷಿಗಳಿಂದ ಭರಪೂರ ಟಿಕೆಟ್ ಅರ್ಜಿ – ನವೆಂಬರ್ 21 ರವರೆಗೆ ವಿಸ್ತರಣೆ