ಪತಿ ಬುದ್ದಿ ಮಾತು ಹೇಳಿದ್ದರಿಂದ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡರೆ, ಪತ್ನಿ ಆತ್ಮಹತ್ಯೆಯಿಂದ ನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದ ನಿವಾಸಿ ಪತ್ನಿ ಶೈಲಾ (29) ಮತ್ತು ಪತಿ ಮಹಂತೇಶ್(35) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಸದಾ ಮೊಬೈಲ್ ನಲ್ಲಿ ಮುಳುಗಿರುತ್ತಿದ್ದ ಪತ್ನಿಗೆ ನಿನ್ನೆ ಪತಿ ಬೈದು ಬುದ್ದಿವಾದ ಹೇಳಿದ್ದರು. ಇದರಿಂದ ನೊಂದ ಪತ್ನಿ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನೊಂದು ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಂಪತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ಪುಟ್ಟ ಮಕ್ಕಳು ಅನಾಥರಾಗಿದ್ದು, ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.