ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejaswi Surya) ಭೇಟಿ ವೇಳೆ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಹೈಡ್ರಾಮಾ ನಡೆದಿದೆ. ಸೂರ್ಯ ಬೆಂಬಲಿಗರು ಬ್ಯಾರಿಕೇಡ್ ಮುರಿದು ದೇವಸ್ಥಾನದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶ್ರಾವಣ ಮಾಸದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ತೇಜಸ್ವಿ ಸೂರ್ಯ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಆದರೆ, ಅವರ ಬೆಂಬಲಿಗರಿಗೆ ಪ್ರವೇಶ ನಿರಾಕರಿಸಿದ್ದರಿಂದ ಗಲಾಟೆ ಉಂಟಾಯಿತು ಎನ್ನಲಾಗಿದೆ. ಇದನ್ನೂ ಓದಿ : – BREAKING NEWS -ಲೋಕಾಯುಕ್ತ ವ್ಯಾಪ್ತಿಗೆ ಎಸಿಬಿ – ಹೈಕೋರ್ಟ್ ಮಹತ್ವದ ಆದೇಶ
ತಮಗೆ ದೇವಸ್ಥಾನದೊಳಗೆ ಪ್ರವೇಶ ನೀಡಬೇಕೆಂದು ರೊಚ್ಚಿಗೆದ್ದ ಬಿಜೆಪಿ ಯುವ ಮೋರ್ಚಾ (Yuva Morcha) ಕಾರ್ಯಕರ್ತರು ದೇವಸ್ಥಾನದ ಬ್ಯಾರಿಕೇಡ್ಗಳನ್ನು ಬೀಳಿಸಿ ಒಳಗೆ ನುಗ್ಗಿದ್ದು, ಸೆಕ್ಯುರಿಟಿಗಳ ಮೇಲೆ ಹಲ್ಲೆ ನಡೆಸಿ, ಅರ್ಚಕರನ್ನೂ ತಳ್ಳಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಮಹಾಕಾಳೇಶ್ವರ ದೇವಾಲಯ 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಈ ದೇಗುಲಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ, ವಿಶೇಷವಾಗಿ ಶ್ರಾವಣ ಮಾಸದಲ್ಲಿ ದೇವಸ್ಥಾನದ ಆವರಣವು ಭಕ್ತರಿಂದ ತುಂಬಿ ತುಳುಕುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಗೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.
ಇದನ್ನೂ ಓದಿ : – ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ