ಚಿಕ್ಕಮಗಳೂರಲ್ಲಿ ಅನೇಕ ಬಾರಿ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಬರಲಾಗಿರಲಿಲ್ಲ .ಈ ದಿನ ಮಳೆ ಇದ್ರು ಬಂದಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು , ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ .
ಇಡೀ ರಾಜ್ಯಕ್ಕೆ ನಿಸರ್ಗವನ್ನು ಹಂಚುವಂತಹ ಶಕ್ತಿ ಚಿಕ್ಕಮಗಳೂರಿಗಿದೆ . ವಿಶೇಷವಾಗಿ ಸಮಗ್ರ ಅಭಿವೃದ್ಧಿ ಜೊತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡುತ್ತೇನೆ . 2019 ರ ಪ್ರವಾಹದ ಸಂತ್ರಸ್ತರಿಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಮೂಡಿಗೆರೆ ಕ್ಷೇತ್ರದ ಸಮಸ್ಯೆಯನ್ನು ವಿಶೇಷವಾಗಿ ಗಮನಿಸುತ್ತೇನೆ.
ವರದಿ ತೆಗೆದುಕೊಂಡು ನ್ಯಾಯಸಮ್ಮತವಾಗಿ ಪರಿಹಾರ ನೀಡಲು ಸೂಚಿಸುತ್ತೇನೆ. ಬೆಳಗಾವಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇದೇ ರೀತಿ ಸಮಸ್ಯೆಯಾಗಿತ್ತು . ಪುನರ್ ಪರಿಶೀಲನೆ ಮಾಡಿ ನೈಜ ಸಂತ್ರಸ್ತರಿಗೆ ಪರಿಹಾರ ಕೊಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ರು. ಇದನ್ನೂ ಓದಿ :- ಕಾಫಿ ನಾಡು ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ