ಚಿಕ್ಕಮಗಳೂರಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ –ಸಿಎಂ ಬೊಮ್ಮಾಯಿ 

ಚಿಕ್ಕಮಗಳೂರಲ್ಲಿ ಅನೇಕ ಬಾರಿ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಬರಲಾಗಿರಲಿಲ್ಲ .ಈ ದಿನ ಮಳೆ ಇದ್ರು ಬಂದಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು , ಜಿಲ್ಲೆಯ  ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ .

ಇಡೀ ರಾಜ್ಯಕ್ಕೆ ನಿಸರ್ಗವನ್ನು ಹಂಚುವಂತಹ ಶಕ್ತಿ ಚಿಕ್ಕಮಗಳೂರಿಗಿದೆ . ವಿಶೇಷವಾಗಿ ಸಮಗ್ರ ಅಭಿವೃದ್ಧಿ ಜೊತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡುತ್ತೇನೆ . 2019 ರ ಪ್ರವಾಹದ ಸಂತ್ರಸ್ತರಿಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಮೂಡಿಗೆರೆ ಕ್ಷೇತ್ರದ ಸಮಸ್ಯೆಯನ್ನು ವಿಶೇಷವಾಗಿ ಗಮನಿಸುತ್ತೇನೆ.

ವರದಿ ತೆಗೆದುಕೊಂಡು ನ್ಯಾಯಸಮ್ಮತವಾಗಿ ಪರಿಹಾರ ನೀಡಲು ಸೂಚಿಸುತ್ತೇನೆ.  ಬೆಳಗಾವಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇದೇ ರೀತಿ ಸಮಸ್ಯೆಯಾಗಿತ್ತು . ಪುನರ್ ಪರಿಶೀಲನೆ ಮಾಡಿ ನೈಜ ಸಂತ್ರಸ್ತರಿಗೆ ಪರಿಹಾರ ಕೊಡುತ್ತೇವೆ  ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ರು. ಇದನ್ನೂ ಓದಿ :- ಕಾಫಿ ನಾಡು ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!