ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ ಎಂದು ಮಾಜಿ ಸಚಿವರ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರು ಮಠದ ಸ್ವಾಮೀಜಿಯನ್ನು ಶುಕ್ರವಾರ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಬೀಳಿಸಿ, ಹೊಸ ಸರಕಾರ ರಚಿಸುವ ಶಕ್ತಿಯನ್ನು ಆ ದೇವರು ನನಗೆ ಕೊಟ್ಟಿದ್ದಾನೆ. ಅಂತಹದ್ದರಲ್ಲಿ ನಾನು ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಲು ಸ್ವಾಮೀಜಿ ಭೇಟಿ ಮಾಡಬೇಕಿತ್ತಾ? ಎಂದು ಪ್ರಶ್ನಿಸಿದರು.
ಇನ್ನು 8 ರಿಂದ 10 ದಿನ ಮಾಧ್ಯಮದವರು ನನ್ನನ್ನು ಬಿಟ್ಟು ಬಿಡಿ. ನಾನು ಅಲ್ಲಿಯವರೆಗೂ ಏನು ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ. ಒಂದು ವೇಳೆ ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡುತ್ತೇನೆ ಎಂದು ಅವರು ಹೇಳಿದರು.