ನಾನು ಯಾರ ಹೇಳಿಕೆ ಬಗ್ಗೆನೂ ತಲೆಕೆಡಿಸಿಕೊಂಡಿಲ್ಲ. ಒಂದಿಬ್ಬರು ಮಾತ್ರ ನನ್ನ ವಿರುದ್ಧ ಮಾತನಾಡಿದ್ದಾರೆ. ವಿಶ್ವನಾಥ್ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಮಾತನಾಡಬೇಕು ಅಂದವರಿಗೆ ಅರುಣ್ ಸಿಂಗ್ ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಯಾರೋ ಒಂದಿಬ್ಬರು ಮಾತನಾಡಿದ್ದಾರೆ. ಅವರಿಗೆ ಸಮಸ್ಯೆ ಇದ್ದರೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳಬುದು ಎಂದರು.