ಸಿದ್ರಮುಲ್ಲಾಖಾನ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ – ಸಿದ್ದರಾಮಯ್ಯ

ಬಿಜೆಪಿ ಸಿದ್ದರಾಮಯ್ಯ ( SIDDARAMAIAH ) ಗೆ ಸಿದ್ರಾಮುಲ್ಲಾ ಖಾನ್ ಹೆಸರು ಬಳಸಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸಿದ್ದರಾಮಯ್ಯ ( SIDDARAMAIAH ) ಗೆ ಸಿದ್ರಾಮುಲ್ಲಾ ಖಾನ್ ಹೆಸರು ಬಳಸಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ. ಅವರಾದರೂ ಬೇರೆ ಏನು ಮಾಡಲು ಸಾಧ್ಯ..? ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳನ ಮಸಿ ಬಳಿದುಕೊಂಡ ಮುಖವನ್ನು ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ..? ಮೈತುಂಬಾ ಕಪ್ಪು ಬಳಿದುಕೊಂಡು ದುಷ್ಟರಿಗೆ ಬಿಳಿ ಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ.

ಮುಸ್ಲಿಂ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಫರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ.
ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿದ್ದಾರೆ. ಬಹಳಷ್ಟು ಜನ ನನ್ನನ್ನು ಅನ್ನರಾಮಯ್ಯ , ರೈತರಾಮಯ್ಯ, ಕನ್ನಡರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್ ( SIDDARAMULLA  KHAN ) ಎಂದು ಕರೆದರೆ ಅದಕ್ಕೂ ಖುಷಿಪಡುವೆ. ನನ್ನ ವಿರುದ್ದದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಇಂತಹ ಅಪಪ್ರಚಾರಗಳಿಗೆ ಹೆದರಿ ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೆ ಎಂದು ಹೇಳಿದ್ರು.   ಇದನ್ನು ಓದಿ : –  ದೆಹಲಿ ತಂಡಕ್ಕೆ ವಿರೇಂದ್ರ ಸೆಹ್ವಾಗ್ ಪುತ್ರ ಎಂಟ್ರಿ…!

Karnataka CM Basavaraj Bommai finally allocates cabinet portfolios - The  Economic Times

ಬಿಜೆಪಿ ( BJP ) ಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷಧರಿಸಿ ಟಿಪ್ಪು ಜಯಂತಿ ಆಚರಿಸಿರುವುದು ಮಾತ್ರವಲ್ಲ ಟಿಪ್ಪುವನ್ನು ಹಾಡಿ ಹೊಗಳಿದ್ದಕ್ಕೆ ಸಾಕ್ಷಿಗಳಿವೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸಿದ್ದು ಮಾತ್ರವಲ್ಲ ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಾಯಕರು ನಡೆಸುತ್ತಿದ್ದಾರೆ ಎಂದು ಹೇಳಿದ್ರು.

ಇದನ್ನು ಓದಿ : –  ಹಾವೇರಿಯಲ್ಲಿ ವಿಜೃಂಭಣೆಯಿಂದ ನಡೆದ ಚೌಡೇಶ್ವರಿ ದೇವಿಯ ಕಾರ್ತಿಕ ಉತ್ಸವ…

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!