ವಿಜಯಪುರ : ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಆದರೆ, ಡ್ರಗ್ಸ್ ವಿಚಾರದಲ್ಲಿ ನನ್ನನ್ನು ಶೇ. 100 ರಷ್ಟು ಟಾರ್ಗೆಟ್ ಮಾಡಲಾಗಿದೆ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ಶೇ.100 ಟಾರ್ಗೆಟ್ ಮಾಡಲಾಗಿದೆ. ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಪ್ರತಿ ವಿಚಾರದಲ್ಲೂ ಹೆಣ್ಮಕ್ಕಳನ್ನು ತುಂಬಾ ಸುಲಭವಾಗಿ ಟಾರ್ಗೆಟ್ ಮಾಡೋದು ಹವ್ಯಾಸವಾಗಿದೆ ಎಂದು ನಟಿ ರಾಗಿಣಿ ಅಸಮಾಧಾನ ಹೊರಹಾಕಿದರು.
ಡ್ರಗ್ಸ್ ಕೇಸ್ ಕುರಿತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಗಿಣಿ, ಬ್ಲೇಮ್ ಮಾಡುವ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ರೆ ಸಾಕು. ಅವರು ನಿಜವಾಗಿಯೂ ನನಗೆ ಪರಿಚಯವಿಲ್ಲ, ಅವರೊಂದಿಗೆ ನಾನು ಮಾತನಾಡಿಯೂ ಇಲ್ಲ. ಅವರು ಏನು ಮಾತಾಡ್ತಾರೋ ಮಾತಾಡಲಿ. ಅವರವರ ಒಪೀನಿಯನ್ ಮಾತಾಡ್ತಾರೆ, ಅದನ್ನು ನಾನು ಕಂಟ್ರೋಲ್ ಮಾಡಲು ಆಗಲ್ಲ ನನ್ನನ್ನು ಎಲ್ಲರೂ ಇಷ್ಟ ಪಡ್ತಾರೆ, ನನಗೆ ಫ್ಯಾನ್ಸ್ ಇದ್ದಾರೆ, ಅವರಿಗೆಲ್ಲ ಧನ್ಯವಾದ ಹೇಳ್ತೇನೆ ಎಂದು ಹೇಳಿದರು.
ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್ಪೀರಿಯನ್ಸ್ ಆಗಿಲ್ಲ :
ಒಂದು ಶಾರ್ಟ್ ಕಟ್, ಮತ್ತೊಂದು ಲಾಂಗ್ ಲೈಫ್. ಕಷ್ಟಪಟ್ಟರೆ ನಾವು ಬೆಳೀತಿವಿ, ಪ್ರತಿಯೊಂದು ಸ್ಟೆಪ್ ಬೈ ಸ್ಟೆಪ್ ಆಗುತ್ತದೆ. ಶಾರ್ಟ್ ಕಟ್ ತಗೊಂಡರೆ ಕೆಲವೊಮ್ಮೆ ರಾಂಗ್ ಪರ್ಸನ್ ಮೀಟ್ ಮಾಡಬೇಕಾಗುತ್ತೆ. ಅತೀ ಶೀಘ್ರದಲ್ಲಿ ನೇಮು, ಫೇಮು, ದುಡ್ಡು ಗಳಿಸೋದನ್ನ ಬಿಟ್ಟು ನಮ್ಮ ಕೆಲಸದ ಮೇಲೆ ವಿಶ್ವಾಸವಿಟ್ಟು, ನಾವು ಏನು ಮಾಡುತ್ತೇವೆ ಅನ್ನೋದರ ಮೇಲೆ ಫೋಕಸ್ ಮಾಡಬೇಕು.
ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್ಪೀರಿಯನ್ಸ್ ಆಗಿಲ್ಲ. ಹನ್ನೆರಡು ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿದ್ದೇನೆ, ಅಲ್ಲಿ ನಾನು ಕಾಸ್ಟಿಂಗ್ ಕೌಚ್ ಬಗ್ಗೆ ನೋಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಟಿ ರಾಗಿಣಿ, ಯಾರಾದ್ರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದ್ರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು. ಅವರಿಗೆ ಆ ಥರ ಅನುಭವ ಆಗಿರಬೇಕು, ಅದರ ಹಿಂದೆ ಸಾಕಷ್ಟು ಕಾರಣಗಳು ಇರುತ್ತವೆ ಎಂದರು.