ರಾಜ್ಯಪಾಲರನ್ನು ಭೇಟಿ ಮಾಡಿ ಈಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ 2 ವರ್ಷಗಳ ಸಾಧನಾ ಸಮಾವೇಶದ ಕೊನೆಯಲ್ಲಿ ಭಾವೋದ್ವೇಗದಿಂದ ಮಾತನಾಡಿದ ಯಡಿಯೂರಪ್ಪ, ಕಾರ್ಯಕ್ರಮ ಮುಗಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದರು.
ಸ್ವಂತ ಕಾರು ಇಲ್ಲದೇ ಇದ್ದ ಕಾಲದಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಕಟ್ಟಿದ್ದೇನೆ. ಅನಿರ್ವಾಯ ಸಂದರ್ಭದಲ್ಲಿ ಜೆಡಿಎಸ್ ಜೊತೆ ಮೈತ್ರಿ ಸರಕಾರ ರಚನೆ ಮಾಡಿದ್ದೇವು. ಅಪ್ಪ-ಮಗನ ಬೇಡಿಕೆಗಳಿಗೆ ಮಣಿಯದೇ ರಾಜೀನಾಮೆ ನೀಡಿದ್ದೆ. ಇದೀಗ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದು ಅವರು ಹೇಳಿದರು.
ಅತ್ಯಂತ ಕಠಿಣ ಸಂದರ್ಭದಲ್ಲೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಇದೀಗ ನಾನು ಸಮಾವೇಶ ಮುಗಿದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರ ಕಣ್ಣೀರಿಡುತ್ತಾ ಘೋಷಣೆ ಮಾಡಿದರು.