ದೆಹಲಿಯ ಹೈಕಮಾಂಡ್ ಸೂಚಿಸಿದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಸೇವೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸ ಇಟ್ಟು ಮುಂದುವರಿಯಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಈ ಸ್ಥಾನದಲ್ಲಿ ಇರುತ್ತೇನೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡಲು ನಾನು ಸಿದ್ಧ ಎಂದರು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರು ವರ್ಗ ಮಾಡಬೇಡಿ ಎಂದು ಕೇಳಿಕೊಂಡರು. ಆದರೆ ನಿರ್ಧಾರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿರುವೆ ಎಂದು ಯಡಿಯೂರಪ್ಪ ಹೇಳಿದರು.