ಕಳೆದ ತಿಂಗಳು ಕಾಂಗ್ರೆಸ್ (Congress) ತ್ಯಜಿಸಿದ್ದ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ (Hardhik patel) , ಬಿಜೆಪಿ (bjp) ಸೇರ್ಪಡೆಯಾಗುವುದು ಖಚಿತವಾಗಿದೆ.
ತಾವು ‘ಹೊಸ ಅಧ್ಯಾಯ’ ಆರಂಭಿಸುತ್ತಿರುವುದಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿ (Narendra modi) ಅವರ ನಾಯಕತ್ವದಲ್ಲಿ ‘ಸಣ್ಣ ಸೈನಿಕ’ನಂತೆ (Soldier) ಕೆಲಸ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ. “ರಾಷ್ಟ್ರೀಯ ಹಿತಾಸಕ್ತಿ, ಪ್ರಾದೇಶಿಕ ಹಿತಾಸಕ್ತಿ ಮತ್ತು ಸಾಮಾಜಿಕ ಹಿತಾಸಕ್ತಿಯ ಭಾವನೆಯೊಂದಿಗೆ ನಾನು ಹೊಸ ಅಧ್ಯಾಯ ಆರಂಭಿಸಲಿದ್ದೇನೆ. ದೇಶದ ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ಭಾಯ್ ಅವರ ನಾಯಕತ್ವದ ಅಡಿ ರಾಷ್ಟ್ರ ಸೇವೆಯಲ್ಲಿನ ಮಹತ್ವದ ಕಾರ್ಯದಲ್ಲಿ ಸಣ್ಣ ಸೈನಿಕನಂತೆ ನಾನು ಕೆಲಸ ಮಾಡಲಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : – ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು- ಕಟೀಲ್ ಗೆ ಡಿಕೆಶಿ ಪ್ರಶ್ನೆ
ಹಾರ್ದಿಕ್ ಪಟೇಲ್ ತಮ್ಮ ಮನೆಯಲ್ಲಿ ಪೂಜಾ ಕಾರ್ಯಕ್ರಮ ನಡೆಸಿದ್ದಾರೆ. ಇಂದು ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅವರ ಕೆಲವು ಬೆಂಬಲಿಗರು ಕೂಡ ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ : – ಹಾಸನ ನಗರಸಭಾ ಸದಸ್ಯ ಪ್ರಶಾಂತ್ ಭೀಕರ ಹತ್ಯೆ