ಮೈಸೂರು ಜಿಲ್ಲಾಧಿಕಾರಿಯಾಗಿ ವಿವಾದಕ್ಕೆ ಗುರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿರುದ್ಧ ಕೇಳಿ ಬಂದಿರುವ ಆರೋಪ ಕುರಿತು ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ನಾಲ್ಕು ಆರೋಪ ಕೇಳಿ ಬಂದಿದ್ದವು. ನಾಲ್ಕು ಆರೋಪಗಳ ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಮ್ ಅವರನ್ನು ನೇಮಿಸಿದ್ದು, 30 ದಿನದಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ :- ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಬದ್ಧ – ಸಿಎಂ ಬೊಮ್ಮಾಯಿ ಸ್ಪಷ್ಟನೆ
ಸಿಂಧೂರಿ ವಿರುದ್ಧ ಕೇಳಿ ಬಂದ ಆರೋಪಗಳು
ಪ್ರಸ್ತು ಮುಜರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಭಾರೀ ವಿವಾದಗಳಿಗೆ ಗುರಿಯಾಗಿದ್ದರು. ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಹಣ ಕೊಟ್ಟು ಪರಿಸರ ಸ್ನೇಹಿ ಬ್ಯಾಗ್ ಖರೀದಿ ಮಾಡಿದ್ದಾರೆ ಎಂಬುದು ಅವರ ಮೇಲಿರುವ ಮೊದಲ ಆರೋಪ.
ಜಿಲ್ಲಾಧಿಕಾರಿಗಳ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚ ಮಾಡಿ ಅನಧಿಕೃತ ಈಜುಕೊಳ ಮತ್ತು ಜಿಮ್ ನಿರ್ಮಿಸಿದ್ದಾರೆ ಎಂಬುದು ಎರಡನೇ ಆರೋಪ. ಕೋವಿಡ್ ಸಂದರ್ಭದಲ್ಲಿ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿದ್ದು, ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳಿಗೆ ಸಿಂಧೂರಿ ನಿರ್ಧಾರ ಕಾರಣ
ಇದನ್ನೂ ಓದಿ :- ಮಕ್ಕಳಿಗೆ ಎಡಪಂಥ ಬಲಪಂಥ ಎನ್ನುವುದಕ್ಕಿಂತ ದೇಶ ಮುಖ್ಯ – ಸಿದ್ದರಾಮಯ್ಯ