ಇಂಗ್ಲೆಂಡ್ ವಿರುದ್ಧ ಓವಲ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಗೆಲುವಿನ ನಂತರ ಭಾರತ ತಂಡದ ಆಟಗಾರರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರೀ ಬಡ್ತಿ ಪಡೆದಿದ್ದಾರೆ.
ಬುಧವಾರ ಬಿಡುಗಡೆ ಆದ ರ್ಯಾಂಕಿಂಗ್ ನ ಬೌಲಿಂಗ್ ವಿಭಾಗದಲ್ಲಿ 9ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಈ ಮೂಲಕ ಅಗ್ರ 10ರೊಳಗೆ ಸ್ಥಾನ ಉಳಿಸಿಕೊಂಡಿದ್ದಾರೆ. ಬುಮ್ರಾ ಎರಡೂ ಇನಿಂಗ್ಸ್ ಗಳಲ್ಲಿ ಒಟ್ಟು 4 ವಿಕೆಟ್ ಪಡೆದರೂ ಸರಣಿಯಲ್ಲಿ ಈಗಾಗಲೇ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ತಂಡದ ಮಧ್ಯಮ ವೇಗಿ ಜೇಮ್ಸ್ ಆಂಡರ್ಸನ್ 2 ಸ್ಥಾನ ಕುಸಿದು 7ನೇ ಸ್ಥಾನಕ್ಕೆ ಜಾರಿದ್ದಾರೆ. ಮತ್ತೊಬ್ಬ ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ 4ನೇ ಟೆಸ್ಟ್ ನಲ್ಲಿ 7 ವಿಕೆಟ್ ಪಡೆಯುವ ಮೂಲಕ ಅಗ್ರ 10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮ ವೃತ್ತಿಜೀವನದಲ್ಲೇ ಗರಿಷ್ಠ 813.40 ಅಂಕ ಪಡೆದಿದ್ದು, 2ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ. ಕಳೆದ ವಾರ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ರೋಹಿತ್ ಅಂಕಗಳ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ. ರೋಹಿತ್ ಓವಲ್ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ತಂಡವನ್ನು ಆಧರಿಸಿದರೆ, ಕೊಹ್ಲಿ ಅರ್ಧಶತಕ ಗಳಿಸಿದ್ದರು.
ಇದೀಗ ಅಗ್ರ 10ರೊಳಗೆ ಭಾರತದ ಇಬ್ಬರು ಬ್ಯಾಟ್ಸ್ ಮನ್ ಗಳು ಮಾತ್ರ ಸ್ಥಾನ ಪಡೆದಿದ್ದಾರೆ. ಕಳೆದ ವಾರ 10ರಿಂದ ಹೊರಬಿದ್ದಿದ್ದ ರಿಷಭ್ ಪಂತ್ ಇದೀಗ 13ನೇ ಸ್ಥಾನಕ್ಕೆ ಕುಸಿದಿದ್ದಾರೆ.