ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಬುಧವಾರ ಬಿಡುಗಡೆ ಆದ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಅಗ್ರಸ್ಥಾನಕ್ಕೆ ಮರಳಿದ್ದು, ಕಳೆದ ವರ್ಷ ಬಾಕ್ಸಿಂಗ್ ಡೇ ಟೆಸ್ಟ್ ನಂತರ ನಂ.1 ಪಟ್ಟ ಅಲಂಕರಿಸಿದ್ದಾರೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಕೇನ್ ವಿಲಿಯಮ್ಸನ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ 13 ರನ್ ಗಳಿಸಿದ್ದರು. ಗಾಯಗೊಂಡ ಕಾರಣ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಈ ಹಿನ್ನೆಲೆಯಲ್ಲಿ ಸ್ಮಿತ್ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.