ಮುಂದಿನ ಚುನಾವಣೆಯಲ್ಲಿ( Karnataka Assembly Election 2023 ) ಸಚಿವ ಮುರುಗೇಶ್ ನಿರಾಣಿ (Murugesh Nirani) ಸ್ಪರ್ಧೆ ಮಾಡುವ ಬಗ್ಗೆ ಖಚಿತಪಡಿಸಿದ್ದಾರೆ. ಅಲ್ಲದೇ ಕುಟುಂಬ ರಾಜಕಾರಣ ಬಗ್ಗೆಯೂ ಮತನಾಡಿದ್ದು, ಕುಟುಂಬದಲ್ಲಿ ಇಬ್ಬರನ್ನು ಬಿಟ್ಟು ಮೂರನೇಯವರು ಸ್ಪರ್ಧೆ ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದಾರೆ.
ಬಾಗಲಕೋಟೆ ( BAGALAKOTE ) ಯಲ್ಲಿ ಮಾತನಾಡಿದ ಮುರುಗೇಶ್ ನಿರಾಣಿ, ಯಾವುದೇ ಕಾರಣಕ್ಕೂ ನನ್ನ ಮಗ ರಾಜಕಾರಣಕ್ಕೆ ನೂರಕ್ಕೆ ನೂರು ಬರಲ್ಲ. ಅವನಿಗೆ ಅದು ಆಸಕ್ತಿಯೂ ಇಲ್ಲ. ನಾನು ಕರೆದರೂ ಅವನು ಬರಲ್ಲ. ನಮ್ಮ ಕುಟುಂಬದಲ್ಲಿ ಮುರುಗೇಶ್ ನಿರಾಣಿ ಮತ್ತು ಹನಮಂತ ನಿರಾಣಿ ಮಾತ್ರ ಇರ್ತಾರೆ. ನಮ್ಮಿಬ್ಬರನ್ನು ಬಿಟ್ಟು ಮೂರನೇಯವರು ಸ್ಪರ್ಧೆ ಮಾಡಲ್ಲ. ಒಂದು ವೇಳೆ ಮನೆಯಲ್ಲಿ ಯಾರಾದರೂ ಸ್ಪರ್ಧೆ ಮಾಡುತ್ತೇನೆ ಅಂದ್ರೆ ನಾನು ನಿವೃತ್ತಿ ಹೊಂದುತ್ತೇನೆ ಎಂದು ಸ್ಪಷ್ಟಪಡಿಸಿದರು. ನನಗೂ ಇಪ್ಪತ್ತು ವರ್ಷ ಜನ ಆಶೀರ್ವಾದ ಮಾಡಿದ್ದಾರೆ. ನಾನು ಫ್ಯಾಕ್ಟರಿ ನೋಡಿಕೊಂಡು ಹೋಗುತ್ತೇನೆ. ಸಂಗಮೇಶ್(ಸಹೋದರ) ನಿರಾಣಿ ಬೇಕಿದ್ರೆ ಸ್ಪರ್ಧೆ ಮಾಡಲಿ. ನನ್ನ ಮಗ ಮಾತ್ರ ರಾಜಕಾರಣಕ್ಕೆ ಬರಲ್ಲ ಎಂದು ಪರೋಕ್ಷವಾಗಿ ರಾಜಕೀಯ ನಿವೃತ್ತಿಯಾಗುವುದಕ್ಕೂ ರೆಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ : – ನಾನು ಎಲ್ಲಿಗೆ ಹೋದರೂ ಭಾರತವನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ – ಸುಂದರ್ ಪಿಚೈ