ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ನಡೆಸಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಅರುಣ್ ಕುಮಾರ್ ಮತ್ತು ಸೈಯದ್ ಸಾಕೀಬ್ ಬಂಧಿತ ಆರೋಪಿಗಳು.
ಕೊರೋನಾ ಹಿನ್ನೆಲೆಯಲ್ಲಿ ಆಕ್ಸಿಜನ್ ಅಭಾವ ಹೆಚ್ಚಿರುವ ಕಾರಣ ಹೆಚ್ಚಿನ ಬೆಲೆಗೆ ಆರೋಪಿಗಳಾದ ಅರುಣ್ ಕುಮಾರ್ ಮತ್ತು ಸೈಯದ್ ಸಾಕೀಬ್ ಆಕ್ಸಿಜನ್ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಬೊಮ್ಮನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ ಯಲಹಂಕ ಮಾರ್ಗವಾಗಿ ಆಕ್ಸಿಜನ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.
ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತಿದ್ದಾಗಲೇ ಆರೋಪಿಗಳನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಬಂಧಿತರಿಂದ 5 ಜಂಬೋ ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ಗಳು ಹಾಗು 2 ಕಾರುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.