ಪಿಎಸ್ಐ (PSI) ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯಲ್ಲಿ ಪರೀಕ್ಷೆಯ ಅಕ್ರಮ ಬಯಲಾಗಿತ್ತು. ಬೆಂಗಳೂರಿನಲ್ಲೂ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ :- ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯ – ಆಜಾನ್ ವಿರುದ್ಧ ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ
ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. 22 ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ 12 ಜನರ ಬಂಧಿಸಿದ್ದು, ಉಳಿದವರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬಂಧಿತ 12 ಮಂದಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಿಐಡಿ ಡಿಎಸ್ಪಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನೂ ಸಹ ಸಿಐಡಿಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ :- ಯುವತಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ – ಆರೋಪಿಗಾಗಿ ಪೊಲೀಸರ ತೀವ್ರ ಶೋಧ