ಕೆಆರ್ ಎಸ್ ಜಲಾಶಯಕ್ಕೆ ಕಂಟಕವಾಗಲಿದೆ ಎಂದು 28 ಕಲ್ಲು ಗಾಣಿಗಾರಿಕೆ ನಿಷೇಧಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
28 ಗಣಿಗಾರಿಕೆ ಗುತ್ತಿಗೆ ಹಾಗೂ ಲೈಸೆನ್ಸ್ ಅನ್ನು ಮಂಡ್ಯ ಜಿಲ್ಲಾಧಿಕಾರಿ ರದ್ದುಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.
ಮಂಡ್ಯ ಜಿಲ್ಲಾಧಿಕಾರಿ ಆದೇಶ ಹೊರಡಿಸುವ ಮುನ್ನ ಕಾನೂನು ಪ್ರಕ್ರಿಯೆ ಅನುಸರಿಸಿಲ್ಲ. ಆದ್ದರಿಂದ ಕಾನೂನು ಪ್ರಕ್ರಿಯೆ ಅನುಸರಿಸಿ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ಆದೇಶಿಸಿದೆ.