ಬೆಂಗಳೂರು : ಹದಿನೈದು ದಿನಗಳಿಗೊಮ್ಮೆ ಜಿಲ್ಲಾ ಪ್ರವಾಸ ಮಾಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಸಚಿವರು, ಶಾಸಕರ ಜತೆ ಚರ್ಚಿಸಿ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯುತ್ತೇವೆ ಎಂದರು.
ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇಂತಹ ಅಮಾನವಿಯ ಘಟನೆಯನ್ನು ಸಹಿಸಲು ಆಗುವುದಿಲ್ಲ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.