ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿ ಮಧ್ಯೆ, ಇಸ್ಲಾಮಾಬಾದ್ ಪೊಲೀಸ್ ಇಲಾಖೆ ನಗರದ ಬನಿ ಗಾಲಾದ ಅಕ್ಕಪಕ್ಕದ ಪ್ರದೇಶಗಳಲ್ಲಿ ಭದ್ರತಾ ಪಡೆಯನ್ನು ಹೆಚ್ಚಿಸಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.
ಇಸ್ಲಾಮಾಬಾದ್ ನಲ್ಲಿ ಈಗಾಗಲೇ ಸೆಕ್ಷನ್ 144 ವಿಧಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಇಸ್ಲಾಮಾಬಾದ್ನಲ್ಲಿರುವ ವಸತಿ ಪ್ರದೇಶವಾಗಿರುವ ಬನಿ ಗಾಲಾದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಆಗಮನದ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇಸ್ಲಾಮಾಬಾದ್ ಪೊಲೀಸರು ಇಲ್ಲಿಯವರೆಗೆ ಇಮ್ರಾನ್ ಖಾನ್ ತಂಡದಿಂದ ಹಿಂದಿರುಗುವ ಯಾವುದೇ ದೃಢೀಕೃತ ಸುದ್ದಿಯನ್ನು ಸ್ವೀಕರಿಸಿಲ್ಲ ಎಂದು ಇಸ್ಲಾಮಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : – ಇಂಧನ ದರ ಇಳಿಕೆ – ಭಾರತವನ್ನು ಹೊಗಳಿದ ಇಮ್ರಾನ್ ಖಾನ್