ಆನೆ ದಾಳಿಗೆ ಒಳಗಾದವರಿಗೆ ಪರಿಹಾರ ಹೆಚ್ಚಳ – 7.5ಲಕ್ಷ ಇದ್ದ ಪರಿಹಾರ 15ಲಕ್ಷಕ್ಕೆ ಹೆಚ್ಚಳ

ಆನೆ – ಮಾನವ ಸಂಘರ್ಷದಿಂದ ಸಂಭವಿಸುವ ಹಾನಿಗೆ ಸಂಬಂಧಿಸಿದಂತೆ ನೀಡಲಾಗುವ ಪರಿಹಾರವನ್ನು ದ್ವಿಗುಣಗೊಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾ ಮಾಡಲಾಗಿದೆ.

ಆನೆ – ಮಾನವ ಸಂಘರ್ಷದಿಂದ ಸಂಭವಿಸುವ ಹಾನಿಗೆ ಸಂಬಂಧಿಸಿದಂತೆ ನೀಡಲಾಗುವ ಪರಿಹಾರವನ್ನು ದ್ವಿಗುಣಗೊಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ( BASAVARJ BOMMAI )  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾ ಮಾಡಲಾಗಿದೆ. ಹಾಸನ ( HASSAN )  ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಹಾಸನ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ರಾಜ್ಯದಲ್ಲಿರುವ ಕಾಡಾನೆಗಳ ಸಂಖ್ಯೆ 6,049 | udayavani

ಮಾನವ ಜೀವ ಹಾನಿಗೆ ನೀಡುವ ಪರಿಹಾರ ಮೊತ್ತವನ್ನು 7.5 ಲಕ್ಷ ರೂ.ಗಳಿಂದ 15 ಲಕ್ಷ ರೂ ಹೆಚ್ಷಳ ಹಾಗೂ ಶಾಶ್ವತ ಅಂಗವಿಕಲತೆಗೆ ನೀಡುವ ಪರಿಹಾರವನ್ನು 5 ಲಕ್ಷ ರೂ. ಗಳಿಂದ 10 ಲಕ್ಷ ರೂ ಹೆಚ್ಚಳ ಮಾಡಲಾಗಿದೆ. ಭಾಗಶಃ ಅಂಗವಿಕಲತೆಗೆ ನೀಡುವ ಪರಿಹಾರವನ್ನು 2.5 ಲಕ್ಷ ರೂ. ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಳ ಹಾಗೂ ಗಾಯಗೊಂಡವರಿಗೆ ನೀಡುವ ಪರಿಹಾರ ಮೊತ್ತ 30 ಸಾವಿರ ರೂ. ಗಳಿಂದ 60 ಸಾವಿರ ರೂ. ಗಳಿಗೆ ಹೆಚ್ಚಳ ,ಮಾಡಲಾಗಿದೆ. ಆಸ್ತಿ ಹಾನಿಗೆ ಪರಿಹಾರ ಮೊತ್ತ 10 ಸಾವಿರ ರೂ. ಗಳಿಂದ 20 ಸಾವಿರ ರೂ. ಗಳಿಗೆ ಹೆಚ್ಚಳಸಿದ್ದು, ಜೀವ ಹಾನಿ ಅಥವಾ ಶಾಶ್ವತ ಅಂಗವಿಕಲತೆಯ ಪ್ರಕರಣಗಳಿಗೆ ನೀಡುವ ಕುಟುಂಬ ಮಾಸಾಶನದ ಮೊತ್ತ ಮಾಸಿಕ ರೂ. 2,000 ದಿಂದ 4,000 ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ.

ಇದನ್ನು ಓದಿ : –  ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!