ದೇಶದಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 1,03,558 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 478 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 52,847 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತ 1,25,89,067 ಪೈಕಿ 1,16,82,136 ಮಂದಿ ಗುಣಮುಖಿತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ 1,65,101 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830ಕ್ಕೆ ಏರಿಕೆಯಾಗಿದೆ.