ಲಾರ್ಡ್ಸ್ ಟೆಸ್ಟ್ ಪಂದ್ಯದ ಗೆಲುವಿನಿಂದ ಬೀಗುತ್ತಿರುವ ಭಾರತ ತಂಡ ನಾಳೆಯಿಂದ ಹೆಡಿಂಗ್ಲೆಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ನಿರ್ಧರಿಸಿದೆ.
ಹೆಡ್ಡಿಂಗ್ಲೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲುವಿನ ತಂಡವನ್ನು ಮುಂದುವರಿಯಲು ನಿರ್ಧರಿಸಿದ್ದು, ಇದರಿಂದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯಿಂದ ಮುನ್ನಡೆ ಪಡೆಯುವ ವಿಶ್ವಾಸವಿದೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದರು.
ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ ನಲ್ಲಿ ಮಿಂಚಿದರೂ ಬೌಲಿಂಗ್ ನಲ್ಲಿ ನಿರಾಸೆ ಮೂಡಿಸಿದ್ದರು. ಆದ್ದರಿಂದ ಆರ್.ಅಶ್ವಿನ್ ಅವರನ್ನು ಮೂರನೇ ಟೆಸ್ಟ್ ನಲ್ಲಿ ಆಡಿಸುವ ಮೂಲಕ ಮತ್ತಷ್ಟು ಹಿಡಿತ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈ ವದಂತಿಯನ್ನು ಕೊಹ್ಲಿ ತಳ್ಳಿ ಹಾಕಿದ್ದಾರೆ.