ದೇಶದಲ್ಲಿ ಕಳೆದ ಒಂದು ದಿನದಲ್ಲಿ 16,051 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 206 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 5,12,109ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಂದೇ ದಿನ 37,901 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,21,24,284ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,02,131ಕ್ಕೆ ಇಳಿದಿದೆ.
ಒಂದು ದಿನದಲ್ಲಿ 1,17,591 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,15,85,711ಕ್ಕೆ ಏರಿದೆ.