ದೇಶದಲ್ಲಿ ಕಳೆದ 24 ಗಂಟೆಯಲ್ಲಿ 29,689 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 415 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮಾರ್ಚ್ 16ರ ನಂತರ ಕನಿಷ್ಠ ಪ್ರಮಾಣದ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,14,40,951ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,21,382ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 42,363 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,06,21,449ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,98,100ಕ್ಕೆ ಇಳಿಕೆಯಾಗಿದೆ.