ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,662 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 281 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,34,17,390ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,44,529ಕ್ಕೆ ಏರಿದೆ.
ಒಂದು ದಿನದಲ್ಲಿ 33,798 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,26,32,222ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ 3,40,639ಕ್ಕೆ ಜಿಗಿತ ಕಂಡಿದೆ.
ಕೇರಳದಲ್ಲಿ 23,260 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ 3586 ಪ್ರಕರಣ ದೃಢಪಟ್ಟಿದೆ. ಪ್ರಧಾನಿ ಮೋದಿ ಜನ್ಮದಿನವಾದ ನಿನ್ನೆ ಒಂದೇ ದಿನ 2 ಕೋಟಿಗೂ ಅಧಿಕ ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.