ದೇಶದಲ್ಲಿ ಕಳೆದ 24 ಗಂಟೆಯಲ್ಲಿ 37,154 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 724 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ 39,649 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3 ಕೋಟಿ (3,00,14,713) ಗಡಿ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,50,899ಕ್ಕೆ ಇಳಿದಿದೆ.