ದೇಶದಲ್ಲಿ ಕಳೆದ 24 ಗಂಟೆಯಲ್ಲಿ 34,700 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 553 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ 111 ದಿನದಲ್ಲೇ ಕನಿಷ್ಠ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,06,19,332ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,03,281ಕ್ಕೆ ತಲುಪಿದೆ.
ಕಳೆದ ಒಂದು ದಿನದಲ್ಲಿ 51,884 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,97,52,294ಕ್ಕೆ ತಲುಪಿದೆ. ಇದರಿಂದ ಸಕ್ರಿಯ ಪ್ರಕರಣ 4,64,357ಕ್ಕೆ ಇಳಿಕೆಯಾಗಿದೆ.