ದೇಶದಲ್ಲಿ ಕಳೆದ 24 ಗಂಟೆಯಲ್ಲಿ 37,875 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 369 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,30,96,718ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,41,411ಕ್ಕೆ ಜಿಗಿತ ಕಂಡಿದೆ.
ಕಳೆದ 24 ಗಂಟೆಯಲ್ಲಿ 39,114 ಮಂದಿ ಸೋಂಕಿನಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,22,64,051ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,91,256ಕ್ಕೆ ಇಳಿಕೆಯಾಗಿದೆ.