ದೇಶದಲ್ಲಿ ಕಳೆದ 24 ಗಂಟೆಯಲ್ಲಿ 60,753 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 1674 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,98,23,546ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 3,85,137ಕ್ಕೆ ಏರಿಕೆಯಾಗಿದೆ.
ಒಂದು ದಿನದಲ್ಲಿ 97,743 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,86,78,390ಕ್ಕೆ ಜಿಗಿತ ಕಂಡಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 7,60,019ಕ್ಕೆ ಇಳಿಕೆಯಾಗಿದೆ.