ದೇಶದಲ್ಲಿ ಕಳೆದ 24 ಗಂಟೆಯಲ್ಲಿ 81,466 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 50,356 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 469 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,63,396ಕ್ಕೆ ಜಿಗಿತ ಕಂಡಿದೆ.
ಒಟ್ಟಾರೆ ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,15,25,039ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,14,696ಕ್ಕೆ ಜಿಗಿತ ಕಂಡಿದೆ.