ದೇಶದಲ್ಲಿ ಕಳೆದ ಒಂದು ದಿನದಲ್ಲಿ 3.32,730 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 2263 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಶನಿವಾರ ಪತ್ತೆಯಾದ ಸೋಂಕು ಪ್ರಮಾಣ ವಿಶ್ವದಲ್ಲೇ ಗರಿಷ್ಠ ಸಂಖ್ಯೆಯದ್ದಾಗಿದೆ. ಇದರಿಂದ ಒಟ್ಟಾರೆ ಸೋಂಕಿತರ ಸಂಖ್ಯೆ 1 ಕೋಟಿ, 62, ಲಕ್ಷದ 63,695ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 1,86,920ಕ್ಕೆ ತಲುಪಿದರೆ, ಗುಣಮುಖಿತರ ಸಂಖ್ಯೆ 1,36,48,159ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616ಕ್ಕೆ ಜಿಗಿತ ಕಂಡಿದೆ.