ದೇಶದಲ್ಲಿ ಇದೇ ಮೊದಲ ಬಾರಿ ಒಂದೇ ದಿನ 4 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟರೆ, 4 ಗಡಿ ಸಮೀಪ ಸಾವು ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,12,262 ಕೊರೊನಾ ಸೋಂಕು ಪ್ರಕರಣಗಳು ವರಿದಯಾಗಿದ್ದು, 3980 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 23,01,68ಕ್ಕೆ ಜಿಗಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 3,29,113 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,72,80,844ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 35,66,398ಕ್ಕೆ ತಲುಪಿದೆ.