ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,361 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 416 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಉಳಿದ ರಾಜ್ಯಗಳಲ್ಲಿ ಇಳಿಕೆ ಕಂಡು ಬಂದಿದೆ.
ಒಂದು ದಿನದಲ್ಲಿ ಸುಮಾರು 35,968 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,05,79,106ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,20,967ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,11,189ಕ್ಕೆ ಸ್ಥಿರವಾಗಿದೆ.