ದೇಶದಲ್ಲಿ ಕಳೆ 24 ಗಂಟೆಗಳ ಅವಧಿಯಲ್ಲಿ 1,31 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 780 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ 1,31,968 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,30,60,542ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 1,19,13,292ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9,79,608ಕ್ಕೆ ತಲುಪಿದೆ. ಸಾವಿನ ಸಂಖ್ಯೆ 1,67,642ಕ್ಕೆ ಜಿಗಿತ ಕಂಡಿದೆ,.
ದೇಶದಲ್ಲಿ 9,43,34,262 ಮಂದಿಗೆ ಲಸಿಕೆ ಹಾಕಲಾಗಿದ್ದು, ಅತೀ ಹೆಚ್ಚು ಜನರಿಗೆ ಲಸಿಕೆ ಹಾಕಿದ ಅಮೆರಿಕವನ್ನು ಭಾರತ ಹಿಂದಿಕ್ಕಿ ವಿಶ್ವದಲ್ಲೇ ನಂ.1 ಸ್ಥಾನ ಪಡೆದಿದೆ.