ದೇಶದಲ್ಲಿ ಕಳೆದ ಒಂದು ದಿನದಲ್ಲಿ 30,747 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 541 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮತ್ತೆ ಏರಿಕೆ ದಾಖಲಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,27,54,315ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 5,10,413ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಂದೇ ದಿನ 67,538 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,19,10,984ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 5,19,413ಕ್ಕೆ ಇಳಿದಿದೆ.