ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,831 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 541 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದ 46 ಜಿಲ್ಲೆಗಳಲ್ಲಿ ಶೇ.10ಕ್ಕೆ ಸೋಂಕು ಪ್ರಮಾಣ ಹೆಚ್ಚಳವಾಗಿದ್ದು, ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಈಗಲೇ ಕಟ್ಟೇಚ್ಚರ ವಹಿಸುವಂತೆ ಸೂಚಿಸಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,16,55,824ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,24,351ಕ್ಕೆ ಏರಿದೆ. ಒಂದೇ ದಿನ 39,258 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,08,20,521ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4,10,852ಕ್ಕೆ ಏರಿದೆ.