ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,097 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 546 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 3,13,32,159ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ.
ಒಂದು ದಿನದಲ್ಲಿ 35,087 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,05,03,166ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಸೋಂಕಿತರ ಸಂಖ್ಯೆ 4,08,977ಕ್ಕೆ ಕುಸಿದಿದೆ.
ಒಂದೇ ದಿನ 16,31,266 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ ಒಟ್ಟಾಗಿ 45,45,70,811 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.