ದೇಶದಲ್ಲಿ ಕಳೆದ 24 ಗಂಟೆಯಲ್ಲಿ 31,222 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 290 ಮಂದಿ ಮೃತಪಟ್ಟಿದ್ದಾರೆ. ನಿನ್ನೆಗೆ ಹೋಲಿಸಿದರೆ ಶೇ.19.8ರಷ್ಟು ಸೋಂಕು ಕಡಿಮೆ ಆಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,30,58,843ಕ್ಕೆ ಜಿಗಿತ ಕಂಡಿದ್ದರೆ, ಸಾವಿನ ಸಂಖ್ಯೆ 4,41,042ಕ್ಕೆ ಏರಿದೆ.
ಒಂದು ದಿನದಲ್ಲಿ 42,942 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 3,92,864ಕ್ಕೆ ಇಳಿಕೆಯಾಗಿದೆ.