ದೇಶದಲ್ಲಿ ಕಳೆದ 24ಗಂಟೆಯಲ್ಲಿ 38,079 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 560 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕು ಪ್ರಮಾಣ ಇಳಿಕೆ ಕಂಡು ಬರುತ್ತಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,10,64,908ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,13,091ಕ್ಕೆ ಇಳಿಕೆಯಾಗಿದೆ.
ಒಂದು ದಿನದಲ್ಲಿ 43,916 ಮಂದಿ ಗುಣಮುಕಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,02,27,792ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4,24,025ಕ್ಕೆ ಇಳಿಕೆಯಾಗಿದೆ.