ದೇಶದಲ್ಲಿ 24 ಗಂಟೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯಾದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 38,628 ಸೋಂಕು ಪ್ರಕರಣಗಳು ದೃಢಪಟ್ಟರೆ, 617 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,18,95,385ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,27,371ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 40,017 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,10,55,861ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,12,153ಕ್ಕೆ ಇಳಿಕೆಯಾಗಿದೆ.