ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 41,383 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 507 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 38,652 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,04,29,339ಕ್ಕೆ ಏರಿಕೆಯಾಗಿದೆ. 2224 ಸಕ್ರಿಯ ಪ್ರಕರಣಗಳು ಹೆಚ್ಚಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,09,394ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ ಅತ್ಯಧಿಕ 17,481 ಪ್ರಕರಣಗಳು ದೃಢಪಟ್ಟರೆ, ಮಹಾರಾಷ್ಟ್ರದಲ್ಲಿ 8159 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.