ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,618 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 330 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,29,45,907ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,40,225ಕ್ಕೆ ಜಿಗಿತ ಕಂಡಿದೆ.
ಒಂದೇ ದಿನ 36,385 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,21,00,001ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ಕ್ಕೆ ಮತ್ತೆ ಜಿಗಿ ಕಂಡಿದೆ.