ದೇಶದಲ್ಲಿ ಸೋಂಕು ಪ್ರಮಾಣ ಇಳಿಕೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಕಳೆದ 24 ಗಂಟೆಯಲ್ಲಿ 70,421 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 3921 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,95,10,410ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 3,74,305ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 9,73,158 ಕ್ಕೆ ಕುಸಿದಿದೆ.