ದೇಶದಲ್ಲಿ ಕಳೆ 24 ಗಂಟೆಗಳ ಅವಧಿಯಲ್ಲಿ 96,982 ಸೋಂಕು ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 50,143 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ 446 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಮೃತಪಟ್ಟವರ ಸಂಖ್ಯೆ 1,65,547ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,26,86,049ಕ್ಕೆ ಏರಿಕೆಯಾದರೆ, ಒಟ್ಟಾರೆ ಗುಣಮುಖಿತರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 1,17,32,279ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 7,88,223ಕ್ಕೆ ಏರಿಕೆಯಾಗಿದೆ.